ಚಾಮರಾಜನಗರ : ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ 4 ದಿನಗಳ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಏಪ್ರಿಲ್ 10ರಿಂದ 13ರವರೆಗೆ ನಡೆಯುವ ಯುಗಾದಿ ಜಾತ್ರೆಗೆ ದೇವಾಲಯದ ಅರ್ಚಕರು, ಸಿಬ್ಬಂದಿ, ಸ್ಥಳೀಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಜಿಲ್ಲೆ, ಅಂತರ್ ಜಿಲ್ಲೆ ಹಾಗೂ ಹೊರ ರಾಜ್ಯದ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ.
ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಆದೇಶಿಸಿದ್ದಾರೆ.