ಕೊಳ್ಳೇಗಾಲ/ಚಾಮರಾಜನಗರ: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ಸುಮಾರು 5 ಎಕರೆ ಕಬ್ಬು ಹಾಗು 15ಕ್ಕೂ ಹೆಚ್ಚು ತೆಂಗಿನ ಮರಗಳು ಸುಟ್ಟು ನಾಶವಾಗಿರುವ ಘಟನೆ ಬೂದಿತಿಟ್ಟು ಗ್ರಾಮದಲ್ಲಿ ನಡೆದಿದೆ.
ಬೆಂಡರಹಳ್ಳಿ ಗ್ರಾಮದ ಮರಿಸ್ವಾಮಿ, ಬಸವಣ್ಣ, ಪುಟ್ಟಸ್ವಾಮಿ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಕಬ್ಬಿನ ಗದ್ದೆ ಮತ್ತು ತೆಂಗಿನ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗ್ತಿದೆ.
ಈ ವೇಳೆ ಜಮೀನಿನ ಸುತ್ತಮುತ್ತಲಿನ ರೈತರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಪೂರ್ಣ ಪ್ರಮಾಣದಲ್ಲಿ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.