ಚಾಮರಾಜನಗರ: ಸರಹದ್ದಿನ ಕದನದಲ್ಲಿ ಹುಲಿಯೊಂದು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಎಲಚೆಟ್ಟಿ ಗ್ರಾಮದಲ್ಲಿ ನಡೆದಿದೆ. ಅಂದಾಜು 5 ವರ್ಷ ಗಂಡು ಹುಲಿ ಮೃತಪಟ್ಟಿದ್ದು, ಹುಲಿಗಳ ನಡುವಿನ ಸರಹದ್ದಿನ ಕಾದಾಟದಲ್ಲಿ ಸತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಮೃತ ಹುಲಿ ಮೈಮೇಲೆ ತೀವ್ರತರ ಗಾಯಗಳಾಗಿದ್ದು, ಉಗುರು, ಹಲ್ಲುಗಳು, ಅಂಗಾಂಗಗಳು ಸುರಕ್ಷಿತವಾಗಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಎನ್ಟಿಸಿಎ ಪ್ರತಿನಿಧಿ, ಪಶು ವೈದ್ಯರ ಸಮ್ಮುಖದಲ್ಲಿ ಹುಲಿಯ ಮೃತದೇಹವನ್ನು ಸುಡಲಾಗಿದೆ.