ಚಾಮರಾಜನಗರ: ಜಿಲ್ಲೆಯಲ್ಲಿಂದು 54 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,491ಕ್ಕೆ ಏರಿಕೆಯಾಗಿದೆ.
ಇಂದು 107 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 702 ಕ್ಕೆ ಇಳಿಕೆಯಾಗಿದೆ. 43 ಮಂದಿ ಸೋಂಕಿತರು ಐಸಿಯುನಲ್ಲಿದ್ದು 223 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 600 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಇನ್ನು ಕೊಳ್ಳೇಗಾಲದ 62 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡು ಕಳೆದ 10 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ 18 ರಂದು ಮೃತಪಟ್ಟಿದ್ದಾರೆ. ತಮಿಳುನಾಡಿನ ಈರೋಡ್ ಜಿಲ್ಲೆಯ 85 ವರ್ಷದ ವ್ಯಕ್ತಿ ಕಳೆದ 12 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿ 17 ರಂದು ಮೃತಪಟ್ಟಿದ್ದಾರೆ. ನಿಧನದ ಬಳಿಕ ಕೋವಿಡ್ ಇರುವುದು ದೃಢವಾಗಿದೆ.