ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 58 ಮಂದಿಗೆ ಕೊರೊನಾ ವಕ್ಕರಿಸಿದ್ದು, ಈ ಮೂಲಕ ಅದರ ಸಂಖ್ಯೆ 3,076ಕ್ಕೆ ಏರಿದೆ. ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಬೇಗೂರು ಠಾಣೆ ಎಸ್ಐಗೂ ಸೋಂಕು ತಗುಲಿದ್ದು, ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಯಳಂದೂರಿನ 63 ವರ್ಷದ ವ್ಯಕ್ತಿ ಹಾಗೂ ಹನೂರಿನ 41 ವರ್ಷದ ವ್ಯಕ್ತಿಯೊಬ್ಬರು ಅಸುನೀಗಿದ್ದು ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಾಗೆಯೇ 54 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 608 ಇದ್ದು, 261 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. 876 ಪ್ರಾಥಮಿಕ ಹಾಗೂ ದ್ವೀತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.