ಚಾಮರಾಜನಗರ: ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ಬರೋಬ್ಬರಿ 60 ಲಕ್ಷ ರೂ. ಹಣ ದೇಣಿಗೆ ನೀಡಲಾಗಿದೆ.
ಸಿಎಂ ಯಡಿಯೂರಪ್ಪಗೆ ಇಂದು ಬೆಂಗಳೂರಿನಲ್ಲಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ಚೆಕ್ ಹಸ್ತಾಂತರಿಸಿದ್ದಾರೆ. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ 50 ಲಕ್ಷ ರೂ. ಹಾಗೂ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿಯ 3 ದಿನದ ವೇತನ 10 ಲಕ್ಷ ರೂ. ಸೇರಿ ಒಟ್ಟು 60 ಲಕ್ಷ ರೂ. ಹಣವನ್ನು ಸಿಎಂ ನಿಧಿಗೆ ನೀಡಲಾಗಿದೆ.
ಈ ಕುರಿತು ಈಟಿವಿ ಭಾರತದ ಜೊತೆ ಜಯ ವಿಭವಸ್ವಾಮಿ ಮಾತನಾಡಿ, ನೌಕರರು ಸ್ವಯಂ ಪ್ರೇರಣೆಯಿಂದ 3 ದಿನದ ವೇತನ ಬಿಟ್ಟುಕೊಟ್ಟಿದ್ದಾರೆ. ಇದರ ಜೊತೆಗೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿವೃತ್ತ ಅಧಿಕಾರಿಗಳು, ನೌಕರರು ತಮ್ಮ ಒಂದು ದಿನದ ಪಿಂಚಣಿ ಹಣ ಹಾಗೂ ನೌಕರರು, ಅಧಿಕಾರಿಗಳ ಒಂದು ದಿನದ ವೇತನವನ್ನು ಕೋವಿಡ್-19 ನಿಧಿಗೆ ನೀಡಿದ್ದಾರೆ.
ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ 60 ಲಕ್ಷ ರೂ. ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ 4,07,974 ರೂ.ಗಳ ಚೆಕ್ಅನ್ನು ಸಿಎಂ ಬಿಎಸ್ವೈಗೆ ನೀಡಿರುವುದಾಗಿ ತಿಳಿಸಿದ್ದಾರೆ.