ಚಾಮರಾಜನಗರ: ಜಿಲ್ಲೆಯಲ್ಲಿಂದು 62 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,687ಕ್ಕೆ ಏರಿಕೆಯಾಗಿದೆ.
ಇಂದು ಬರೋಬ್ಬರಿ 222 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 503ಕ್ಕೆ ಇಳಿದಿದೆ. 39 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 222 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
600 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.