ETV Bharat / state

ಚಾಮರಾಜನಗರ ಜಿಲ್ಲೆಯಲ್ಲಿಂದು 66 ಜನರಿಗೆ ಕೊರೊನಾ : 62 ಮಂದಿ ಗುಣಮುಖ - Chamarajanagara corona updates

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Chamarajanagara
Chamarajanagara
author img

By

Published : Oct 10, 2020, 6:48 PM IST

ಚಾಮರಾಜನಗರ: ಜಿಲ್ಲೆಯಲ್ಲಿಂದು 66 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,853ಕ್ಕೆ ಏರಿಕೆಯಾಗಿದೆ.

ಗುಣಮುಖ :

ಇಂದು 62 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 704 ಪ್ರಕರಣಗಳು ಸಕ್ರಿಯವಾಗಿವೆ.

ಇದರಲ್ಲಿ 41 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 205 ಜನರು ಹೋಂ ಐಸೋಲೇಷನ್​ನಲ್ಲಿದ್ದಾರೆ‌.1,056 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಮೃತರ ವಿವರ:

ಈ ದಿನ ಕೊರೊನಾ ಹಾಗೂ ಕೋವಿಡೇತರ ಕಾರಣದಿಂದ ಇಬ್ಬರು ಸೋಂಕಿತರು ಬಲಿಯಾಗಿದ್ದಾರೆ. ಕೊಳ್ಳೇಗಾಲದ 57 ವರ್ಷದ ವ್ಯಕ್ತಿಯೊಬ್ಬರು ಕಳೆದ 28 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ 80 ವರ್ಷದ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಕಾರಣಕ್ಕಾಗಿ 9 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿ ಇಂದು ಮೃತಪಟ್ಟಿದ್ದು, ನಿಧನದ ನಂತರ ಕೋವಿಡ್ ಇರುವುದು ದೃಢಪಟ್ಟಿದೆ.

ಇಂದು ಫೇಸ್ ಬುಕ್ ಲೈವ್ ನಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಜಿಲ್ಲೆಯಲ್ಲಿ ಸಾವಿನ‌ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು 40-60 ವಯಸ್ಸಿನ ವ್ಯಕ್ತಿಗಳು ಹೆಚ್ಚು ಮೃತರಾಗಿದ್ದಾರೆ.‌ ಕೊರೊನಾ ಬಗ್ಗೆ ನಿರ್ಲಕ್ಷ್ಯ ತಾಳದೆ ಮುಂಜಾಗ್ರತೆ ವಹಿಸಬೇಕು. ರೋಗ ಲಕ್ಷಣ ಕಂಡುಬಂದರೆ ಉಪೇಕ್ಷೆ ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.