ಚಾಮರಾಜನಗರ : ಲಾಕ್ಡೌನ್ ಅವಧಿಯಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಬರೋಬ್ಬರಿ 667 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4186ಕ್ಕೆ ಏರಿಕೆಯಾಗಿದೆ.
ಇಂದು 493 ಮಂದಿ ಗುಣಮುಖರಾಗಿದ್ದಾರೆ. 2983 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 8004 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
5 ಮಂದಿ ಸಾವು : ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದೆ. ಇಂದು 5 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆ 225ಕ್ಕೆ ಏರಿಕೆಯಾಗಿದೆ.