ಚಾಮರಾಜನಗರ: ಚಾಮರಾಜನಗರದ ಸಿಸಿಎಫ್ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಇವರ ಸ್ಥಾನಕ್ಕೆ ಉಪೇಂದ್ರ ಪ್ರತಾಪ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಮನೋಜ್ ಕುಮಾರ್ ಅವರನ್ನು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಚಾಮರಾಜನಗರ ಸಿಸಿಎಫ್ ಆಗಿ ವರ್ಗಾವಣೆಗೊಂಡ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದರೊಟ್ಟಿಗೆ ಸರ್ಕಾರ 7 ಮಂದಿ ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.
ಓದಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ರಿತುರಾಜ್ ಅವಸ್ಥಿ