ಚಾಮರಾಜನಗರ: ಇಂದು ಜಿಲ್ಲೆಯಲ್ಲಿ 83 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.
ಕೊರೊನಾ ಪ್ರಕರಣಗಳ ಮಾಹಿತಿ :
ಈ ದಿನ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ4730 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 114 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,730 ಸಕ್ರಿಯ ಪ್ರಕರಣಗಳಿವೆ.
ಇದರಲ್ಲಿ 38 ಮಂದಿ ಸೋಂಕಿತರು ಐಸಿಯುನಲ್ಲಿದ್ದು 269 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 1,328 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಮೃತರ ವಿವರ :
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 60 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡು ಕಳೆದ 6 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಕೋವಿಡ್ ನಿಯಮಾನುಸಾರ ಗೌರವಯುತವಾಗಿ ನೆರವೇರಿಸಿದ್ದಾರೆ.
ಕೋವಿಡ್ ಪರೀಕ್ಷೆ :
ಜಿಲ್ಲೆಯಲ್ಲಿ ಇದುವರೆಗೆ ಸುಮಾರು 70 ಸಾವಿರಕ್ಕೂ ಅಧಿಕ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.