ಚಾಮರಾಜನಗರ: ಜಿಲ್ಲೆಯಲ್ಲಿಂದು 72 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3,418ಕ್ಕೆ ಏರಿಕೆಯಾಗಿದೆ.
ಇಂದು 22 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 627 ಆಗಿದೆ. 25 ಸೋಂಕಿತರು ಐಸಿಯುನಲ್ಲಿದ್ದು, 242 ಜನರು ಹೋಂ ಐಸೋಲೇಷನ್ ನಲ್ಲಿದ್ದಾರೆ. 1,020 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ 63 ವರ್ಷದ ವ್ಯಕ್ತಿಯೊಬ್ಬರು ಸೆ. 17 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೀಕಿನ ಮಾದಾಪುರ ಗ್ರಾಮದ 72 ವರ್ಷದ ವ್ಯಕ್ತಿಯೊಬ್ಬರು ಜಿಲ್ಲಾಸ್ಪತ್ರೆಗೆ ಸೆ.17 ರಂದು ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 75 ಮಂದಿ ಅಸುನೀಗಿದ್ದಾರೆ.
ಇಬ್ಬರ ಅಂತ್ಯಸಂಸ್ಕಾರವನ್ನು ಇಂದು ಕೋವಿಡ್ ಸ್ವಯಂ ಸೇವಕರು ನೆರವೇರಿಸಿದ್ದಾರೆ.