ಚಾಮರಾಜನಗರ: ಜಿಲ್ಲೆಯಲ್ಲಿಂದು 47 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,347ಕ್ಕೆ ಏರಿಕೆಯಾಗಿದೆ.
ಗುಣಮುಖ :
ಇಂದು ಜಿಲ್ಲೆಯಲ್ಲಿ 85 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 757 ಸಕ್ರಿಯ ಪ್ರಕರಣಗಳಿವೆ
ಸಕ್ರಿಯ ಪ್ರಕರಣಗಳಿಷ್ಟು :
ಇದರಲ್ಲಿ 46 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 231 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 611 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಮೃತರ ವಿವರ :
ಸೋಂಕಿನಿಂದ ಇಂದು ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ 48 ವರ್ಷದ ವ್ಯಕ್ತಿ ಕಳೆದ 6 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 115 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾನುಸಾರ ಸ್ವಯಂ ಸೇವಕರು ನೆರವೇರಿಸಿದ್ದಾರೆ.