ಚಾಮರಾಜನಗರ: ಜಿಲ್ಲೆಯಲ್ಲಿ 90 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,342ಕ್ಕೆ ಏರಿಕೆಯಾಗಿದೆ. ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಇಂದು 29 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 854 ಆಗಿದೆ. 40 ಸೋಂಕಿತರು ಐಸಿಯುನಲ್ಲಿದ್ದು, 372 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 1,230 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಯಳಂದೂರು ತಾಲೂಕಿನ ದೇವರಹಳ್ಳಿಯ 85 ವರ್ಷದ ವ್ಯಕ್ತಿ ಸೆ.29ರಂದು ಸೋಂಕು ಕಾಣಿಸಿಕೊಂಡಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 96ಕ್ಕೆ ತಲುಪಿದೆ. ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಕೋವಿಡ್ ನಿಯಮಾನುಸಾರ ನೆರವೇರಿಸಿದ್ದಾರೆ.