ಚಾಮರಾಜನಗರ: ಜಿಲ್ಲೆಯಲ್ಲಿಂದು 99 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,647ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಬರೋಬ್ಬರಿ 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 782 ಸಕ್ರಿಯ ಪ್ರಕರಣಗಳಿವೆ.
ಇದರಲ್ಲಿ 28 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 315 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 1,287 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಇಂದು ಮಹಾಮಾರಿಗೆ ಓರ್ವ ಬಲಿಯಾಗಿದ್ದಾರೆ. ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ 55 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡು ಕಳೆದ 5 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಇಂದು ಬಲಿಯಾಗಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಕೋವಿಡ್ ನಿಯಮಾನುಸಾರ ಗೌರವಯುತವಾಗಿ ನೆರವೇರಿಸಿದ್ದಾರೆ.
ಶತಕ ಮುಟ್ಟಿದ ಮೃತರು:
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ಸಾವನ್ನಪ್ಪಿದವ ಸಂಖ್ಯೆ 100 ಆಗಿದೆ. ಇಲ್ಲಿಯವರೆಗೆ ಕೊರೊನಾ ಕಾರಣಕ್ಕಾಗಿ 72 ಮಂದಿ ಹಾಗೂ ಕೊವಿಡೇತರ ಕಾರಣದಿಂದ 28 ಸೋಂಕಿತರು ಅಸುನೀಗಿದ್ದಾರೆ. ಕೊರೊನಾಗೆ ಬಲಿಯಾದವರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಇದ್ದಾರೆ.