ಚಾಮರಾಜನಗರ: ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಸಮೀಪ ಶನಿವಾರ ನಡೆದಿದೆ.
ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ರಾಜು(55) ಮೃತ ಕರಡಿ ದಾಳಿಗೆ ಬಲಿಯಾಗಿರುವ ವ್ಯಕ್ತಿ. ಬಿಳಿ ಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಹುಚ್ಚನ ಕೆಂಬೆರೆ ಬೀಟ್ ನಲ್ಲಿ ಕರಡಿಯೊಂದು ದಾಳಿ ಮಾಡಿ ಕೊಂದು ಹಾಕಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದಾಗ ಕಾಡೊಳಗಿನ 300 ಮೀ.ನಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ವ್ಯಕ್ತಿಯನ್ನು ಕೊಂದ ಕರಡಿ ಚಿತ್ರವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದೆ.
ಇದನ್ನೂ ಓದಿ: ಹೊಳೆನರಸೀಪುರದಲ್ಲಿ ಹರಿದ ನೆತ್ತರು.. ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳಿಂದ ಮಹಿಳೆಯ ಕತ್ತು ಸೀಳಿ ಕೊಲೆ