ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಜಿಲ್ಲಾಧಿಕಾರಿ ಜೊತೆ ಒಂದಿಡಿ ದಿನ ಇರುವ ವಿಶೇಷ ಅವಕಾಶ ಪಡೆದಿದ್ದಾರೆ.
ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಕೊಳ್ಳೆಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ 10.30ಕ್ಕೆ ಡಿಸಿ ಚಾರುಲತಾ ಸೋಮಲ್ ಅವರು ಸಾರಾ ಅವರನ್ನು ಬರಮಾಡಿಕೊಂಡರು.
ಜಿಲ್ಲಾಧಿಕಾರಿ ಜೊತೆ ಬೆಳಗ್ಗೆಯಿಂದ ಸಂಜೆವರೆಗೂ ಇದ್ದು, ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕಳೆದ ಜುಲೈ ತಿಂಗಳಲ್ಲಿ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜೆ. ಅಗ್ನೀಶ್ ಸಾರಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪಕ್ಕದ ಕುರ್ಚಿಯಲ್ಲೇ ಕುಳಿತು ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಾರಾ ಎಲ್ಲವನ್ನೂ ನೋಟ್ ಮಾಡಿಕೊಳ್ಳುತ್ತಿದ್ದರು, ಜಿಲ್ಲಾಧಿಕಾರಿ ಅವರ ಕಾರ್ಯವೈಖರಿ ಹೇಗಿರುತ್ತೆ ಎಂಬುದನ್ನು ಗಮನಿಸುತ್ತಿದ್ದಾರೆ.
ಇದನ್ನೂ ಓದಿ: ಕಲಬುರಗಿ ಡಿಸಿ ಕಾರ್ಯವೈಖರಿ ವೀಕ್ಷಣೆಗೆ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ