ETV Bharat / state

ಕೆಲಸವಿಲ್ಲದೆ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಹೈದರಾಬಾದಿ​ನಿಂದ ಆಗಮಿಸಿ ಇಲ್ಲಿನ ವೆಸ್ಲಿ ಸೇತುವೆ ಬಳಿ ಕ್ರಿಮಿನಾಶಕ ಸೇವಿಸಿದ ಯುವಕ ಸ್ವಲ್ಪ ಸಮಯದ ನಂತರ ತಾನು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹಾಗೂ ತನ್ನನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಅಲ್ಲಿದ್ದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾನೆ.

a-young-man-who-committed-suicide
ಕೆಲಸ ವಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಯುವಕ
author img

By

Published : Mar 11, 2021, 7:29 PM IST

ಕೊಳ್ಳೇಗಾಲ (ಚಾಮರಾಜನಗರ): ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ಬೆಂಗಳೂರು ಮೂಲದ ವ್ಯಕ್ತಿಯೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ತಲಘಟ್ಟಪುರದ ನಿವಾಸಿ ತಬ್ರಿಬ್ (24) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ ಮತ್ತು ಓರ್ವ ಪುತ್ರಿಯಿದ್ದು, ಕೊರೊನಾ ನಂತರ ಕೆಲಸವಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು, ಒಂದು ವಾರದಿಂದ ಮನೆ ಬಿಟ್ಟು ಹೈದರಾಬಾದ್‌ಗೆ ತೆರಳಿದ್ದರು ಎನ್ನಲಾಗಿದೆ.

ಹೈದರಾಬಾದಿ​​ನಿಂದ ಆಗಮಿಸಿ ಇಲ್ಲಿನ ವೆಸ್ಲಿ ಸೇತುವೆ ಬಳಿ ಕ್ರಿಮಿನಾಶಕ ಸೇವಿಸಿದ ಆತ ಸ್ವಲ್ಪ ಸಮಯದ ನಂತರ ತಾನು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹಾಗೂ ತನ್ನನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಅಲ್ಲಿದ್ದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾನೆ, ಆದರೆ ಕೆಲ ಕಾಲದಲ್ಲಿ ಸಾವನ್ನಪ್ಪಿದ್ದಾನೆ.

ಆತನ ಬಳಿ ದೊರೆತ ಆಧಾರ್ ಕಾರ್ಡ್​ನಲ್ಲಿದ್ದ ವಿಳಾಸ ಆಧರಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಕುಟುಂಬಸ್ಥರು ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೋತಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಹಾಸ್ಟೆಲ್​ ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.