ಚಾಮರಾಜನಗರ: 15 ವರ್ಷದ ಬಾಲಕಿಯನ್ನು ಅಪಹರಿಸಿ ಮದುವೆಯಾಗಿ ಆಕೆಯೊಟ್ಟಿಗೆ ದೈಹಿಕ ಸಂಬಂಧ ಬೆಳೆಸಿದ್ದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆಯನ್ನು ಕೋರ್ಟ್ ವಿಧಿಸಿ ಆದೇಶಿಸಿದೆ. ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಮಹೇಶ್(28)ಶಿಕ್ಷೆಗೆ ಒಳಪಟ್ಟ ಆಪರಾಧಿ. ಕಳೆದ 2019ರ ಮಾರ್ಚ್ 17ರಂದು 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗಿದ್ದ. ನಂತರ ಬೆಂಗಳೂರಿಗೆ ತೆರಳಿ ಬಾಲಕಿಯೊಂದಿಗೆ ದೈಹಿಕ ಸಂಬಂಧ ಮಾಡಿದ ಆರೋಪ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಇದರೊಟ್ಟಿಗೆ 35 ಸಾವಿರ ರೂ.ದಂಡ ವಿಧಿಸಿದ್ದು ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂ. ಹಣವನ್ನು ಒಂದು ತಿಂಗಳೊಳಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ. ಯೋಗೇಶ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ : ಎಬಿವಿಪಿ ಮುಖಂಡ ಅರುಣ್‌ಕುಮಾರ್ ಪಾಟೀಲ ಬಂಧನ