ತುಮಕೂರು: ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ಸಾಗರನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಘಟನೆ ಸಂಭವಿಸಿದೆ. ಅಪಘಾತದಿಂದ ಬೈಕ್ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಗಾಯಗೊಂಡ ಮಹಿಳೆಯನ್ನು ಗುಬ್ಬಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಮೃತಪಟ್ಟ ವ್ಯಕ್ತಿ ಮತ್ತು ಗಾಯಗೊಂಡ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.