ಚಾಮರಾಜನಗರ: ನಟ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾತ್ರಿ ಸಫಾರಿ ಮತ್ತು ರಾತ್ರಿ ಸಂಚಾರ ಕಾನೂನು ಬಾಹಿರವಾಗಿದ್ದರೂ ನಟ ಧನ್ವೀರ್ ತಮ್ಮ ಸ್ನೇಹಿತರೊಡಗೂಡಿ ರಾತ್ರಿ ಸಫಾರಿ ಮಾಡಿದ್ದಾರೆ ಎನ್ನಲಾಗಿದೆ. ಅವರು ಬಂಡೀಪುರದ ಯಾವ ಸ್ಥಳದಲ್ಲಿ ಸಫಾರಿ ಮಾಡಿದ್ದಾರೆ ಎಂಬುದು ಇನ್ನಷ್ಟೇ ತನಿಖೆಯಿಂದ ಗೊತ್ತಾಗಬೇಕಿದೆ.
ಈ ಕುರಿತು ಬಂಡೀಪುರ ಸಿಎಫ್ಒ ಬಾಲಚಂದ್ರ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿ, ನಟ ಧನ್ವೀರ್ ಬಂಡೀಪುರದಲ್ಲಿ ನೈಟ್ ಸಫಾರಿ ಮಾಡಿದ್ದರೆನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪರಿಶೀಲಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅರಣ್ಯ ಇಲಾಖೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.