ETV Bharat / state

ಚಾಮರಾಜನಗರದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಸಕಲ ಸಿದ್ದತೆ... ಎಲ್ಲಾ ಕೇಂದ್ರಗಳಲ್ಲೂ ಸಿಸಿಟಿವಿ ಫಿಕ್ಸ್​​ - ದ್ವಿತೀಯ ಪಿಯು ಪರೀಕ್ಷೆ

ಚಾಮರಾಜನಗರದಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಜಿಲ್ಲೆಯ 6,894 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ‌ ನಿಗಾ ಇಡಲು ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಿಸಿಟಿವಿ ಫಿಕ್ಸ್​​
ಸಿಸಿಟಿವಿ ಫಿಕ್ಸ್​​
author img

By

Published : Mar 2, 2020, 6:17 PM IST

ಚಾಮರಾಜನಗರ: ಮಾ.4ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಜಿಲ್ಲೆಯ 6,894 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ಜಿಲ್ಲೆಯಲ್ಲಿನ‌ 16 ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ‌ ನಿಗಾ ಇಡಲು ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಗುರುತಿಸಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದರು.

ಮಾದ್ಯಮಗಳಿಗೆ ಜಿಲ್ಲಾಧಿಕಾರಿಯಿಂದ ಪರೀಕ್ಷಾ ಕ್ರಮಗಳ ಕುರಿತು ವಿವಿರಣೆ

ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಕೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ಕ್ರಮವನ್ನು ವಹಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲು ಯಾವುದೇ ಜೆರಾಕ್ಸ್ ಅಂಗಡಿಗಳು ಪರೀಕ್ಷಾ ವೇಳೆಯಲ್ಲಿ ತೆರೆಯದಂತೆ ಕ್ರಮ ವಹಿಸುವುದರ ಜೊತೆಗೆ ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷಾ ಕೇಂದ್ರಕ್ಕೆ ಬರುವ ಅಧಿಕಾರಿಗಳಿಗೂ ಮೊಬೈಲ್ ನಿಷೇಧಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ಪರೀಕ್ಷೆ ಬರೆಯಲು ಕೆಎಸ್ಆರ್​ಟಿಸಿ ಬಸ್​ಗಳಲ್ಲಿ ಬರುವ ವಿದ್ಯಾರ್ಥಿಗಳಿಗೆ ನಿಗಮದ ಸಿಬ್ಬಂದಿ ಪಾಸ್ ತೋರಿಸುವಂತೆ ಒತ್ತಾಯ ಮಾಡಬಾರದು. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿದರೆ ಸಾಕು ಅವರನ್ನು ಬಸ್​ನಲ್ಲಿ ಕರೆದುಕೊಂಡು ಬರುವಂತೆ ಕೆಎಸ್ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.