ETV Bharat / state

ಜೀವನದಲ್ಲಿ ಜಿಗುಪ್ಸೆ: ಕೊಳ್ಳೇಗಾಲದಲ್ಲಿ ವೃದ್ಧ ಆತ್ಮಹತ್ಯೆಗೆ ಶರಣು - ಕೊಳ್ಳೇಗಾಲ

ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧನೋರ್ವ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ವ್ಯಾಪ್ತಿಯಲ್ಲಿ ನಡೆದಿದೆ.

ವೃದ್ಧ ಆತ್ಮಹತ್ಯೆಗೆ ಶರಣು
ವೃದ್ಧ ಆತ್ಮಹತ್ಯೆಗೆ ಶರಣು
author img

By

Published : Jul 28, 2020, 12:27 PM IST

ಕೊಳ್ಳೇಗಾಲ(ಚಾಮರಾಜನಗರ): ಕ್ಷಯರೋಗದಿಂದ ಬಳಲುತ್ತಿದ್ದ ವ್ಯಕ್ತಿ ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ತೋಟದ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸತ್ತೇಗಾಲ ಬಳಿ ನಡೆದಿದೆ.

ತವರಿಯಪ್ಪ(60) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ತಮ್ಮ ತೋಟದ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಬಳಿಕ ಅವರನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಅಸುನೀಗಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.