ಚಾಮರಾಜನಗರ: ಲಸಿಕೆ ಹಾಕಿಸಿಕೊಳ್ಳಿ ಅಂದರೆ ಕಾಡಿಗೆ ಓಡುವ ಗಿರಿಜನರು, ಮಚ್ಚು ತೋರಿಸುವ ವಿಶೇಷ ಚೇತನರ ನಂತರ ಇದೀಗ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಆಶಾಕಾರ್ಯಕರ್ತೆಯರಿಗೆ ಬೆದರಿಕೆ ಹಾಕುತ್ತಿದ್ದಾರಂತೆ.
ಇಂದು ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಮಾತನಾಡಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಬಲವಂತ ಮಾಡಿದರೆ ನಿಮಗೇನೋ ಇದರಲ್ಲಿ ಪ್ರಾಫಿಟ್ ಇರಬೇಕು ಅದಕ್ಕೆ ಬಲವಂತ ಮಾಡ್ತೀರಿ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಹೆಚ್ಚು ಒತ್ತಡ ಹೇರಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಾರೆ. ಮತ್ತಿತ್ತರರು ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾದರೆ ಜವಾಬ್ದಾರಿ ಹೊರುತ್ತೇವೆ ಎಂದು ಬಾಂಡ್ ಪೇಪರ್ನಲ್ಲಿ ಬರೆದುಕೊಡಿ ಎನ್ನುತ್ತಾರೆಂದು ಅಳಲು ತೋಡಿಕೊಂಡರು.
ಮತ್ತೋರ್ವ ಆಶಾ ಕಾರ್ಯಕರ್ತೆ ಮಾತನಾಡಿ, ಲಸಿಕೆ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಬಂದರೆ ಜನರ ಮನವೊಲಿಸಬಹುದು. ಮುಖ್ಯವಾಗಿ ಗ್ರಾಪಂ ಸದಸ್ಯರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.