ETV Bharat / state

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 5 ವರ್ಷ ಜೈಲು, 25 ಸಾವಿರ ರೂ. ದಂಡ - ಚಾಮರಾಜನಗರ ಬಾಲಕಿ ಮೇಲೆ ಅತ್ಯಾಚಾರ ಯತ್ನ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದ ಯೋಗೇಶ್ ಅಲಿಯಾಸ್​​ ಯೋಗಿ ಶಿಕ್ಷೆಗೊಳಗಾದ ಅಪರಾಧಿ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಸೂಚಿಸಿದ್ದಾರೆ.

attempted-rape-on-a-girl-in-chamarajanagar
ಯೋಗೇಶ್ ಅ
author img

By

Published : Jan 5, 2021, 8:00 PM IST

ಚಾಮರಾಜನಗರ: ಬಹಿರ್ದೆಸೆಗೆ ತೆರಳಿದ್ದ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ‌. ದಂಡ ವಿಧಿಸಿ ಪ್ರಧಾನ ಮತ್ತು ಸತ್ರ ನ್ಯಾಯಾಧಿಶರಾದ ಸದಾಶಿವ ಎಸ್‌.ಸುಲ್ತಾನ್ ಪುರಿ ಆದೇಶ ನೀಡಿದ್ದಾರೆ.

ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದ ಯೋಗೇಶ್ ಅಲಿಯಾಸ್​​ ಯೋಗಿ ಶಿಕ್ಷೆಗೊಳಗಾದ ಅಪರಾಧಿ. ಇನ್ನು ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಓದಿ-ಗೋ ಹತ್ಯೆ ನಿಷೇಧ ಕಾಯ್ದೆ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ!

ಪ್ರಕರಣದ ಹಿನ್ನೆಲೆ

2018ರ ಮಾರ್ಚ್ 3ರಂದು ಬಹಿರ್ದೆಸೆಗೆ ತೆರಳಿದ್ದ 12 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದಾಗ ಸಮೀಪದಲ್ಲೇ ಇದ್ದ ಮಹೇಶ್ ಎಂಬುವರು ಓಡಿ ಹೋಗಿ ಬಾಲಕಿಯನ್ನು ರಕ್ಷಿಸಿದ್ದರು‌.

ಅಷ್ಟರಲ್ಲಾಗಲೇ ಆರೋಪಿ ಯೋಗೇಶ್ ಅಲ್ಲಿಂದ ಪರಾರಿಯಾಗಿದ್ದ. ಅದಾದ ಬಳಿಕ ನಡೆದ ವಿಚಾರಣೆಗಳಲ್ಲಿ ಆರೋಪ ರುಜುವಾತಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.