ಚಾಮರಾಜನಗರ: ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳುವಾಗ ಆಟೋ ಪಲ್ಟಿಯಾಗಿ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ರಸ್ತೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ಗ್ರಾಮದ ಪೂರ್ಣಿಮ(20) ಮೃತ ದುರ್ದೈವಿ. ಪತಿ ಅಖಿಲೇಶ್ ಜೊತೆ ಆಟೋದಲ್ಲಿ ಆರೋಗ್ಯ ತಪಾಸಣೆಗೆ ತೆರಳುವ ವೇಳೆ ತಿರುವಿನಲ್ಲಿ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಆಕೆ 8 ತಿಂಗಳ ಗರ್ಭೀಣಿಯಾಗಿದ್ದಳು ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನೆರವೇರಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.