ಚಾಮರಾಜನಗರ: ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಆಟೋದಲ್ಲಿ ಕುಳ್ಳಿರಿಸಿಕೊಂಡು ಕೊಳ್ಳೇಗಾಲ ಭಾಗದ ಆಟೋ ಚಾಲಕರು ಅಪಾಯಕ್ಕೆ ಎಡೆ ಮಾಡಿಕೊಡುತ್ತಿರುವ ಆರೋಪ ಕೇಳಿ ಬಂದಿದೆ.
ಅಪಾಯಕ್ಕೆ ಆಹ್ವಾನ ನೀಡುತ್ತಿವೆ ಆಟೋ ಸವಾರಿ
ಮನವಿಗೆ ಸ್ಪಂದಿಸಿದ ಎಸ್ಪಿ:
ಈ ಸಂಬಂಧ ದೂರವಾಣಿ ಮೂಲಕ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಪ್ರತಿಕ್ರಿಯಿಸಿ, ಈಗಾಗಲೇ ಆಟೋಗಳಲ್ಲಿ ಶಾಲಾ ಮಕ್ಕಳನ್ನು ಅಸುರಕ್ಷಿತವಾಗಿ ಕರೆದೊಯ್ಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಪಾಯಕಾರಿ ಆಟೋಗಳ ಚಾಲನೆಯನ್ನು ಗಂಭೀರವಾಗಿ ಇಲಾಖೆ ಪರಿಗಣಿಸಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಆಟೋ ಚಾಲಕರ ನಿರ್ಲಕ್ಷ್ಯಕ್ಕೆ ಕೂಡಲೇ ಪೊಲೀಸ್ ಇಲಾಖೆ ಮತ್ತು ಶಾಲಾ ಆಡಳಿತ ಮಂಡಳಿಗಳು ಬ್ರೇಕ್ ಹಾಕಬೇಕಿದೆ.