ಚಾಮರಾಜನಗರ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆ.30 ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಹರಿದುಹಾಕಿದ್ದಾರೆ.
ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೆಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಚಾಮರಾಜನಗರ ಶಾಸಕ ಸಿ ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ವಿಸಿಟ್ ನಡುವೆ ಚಿಣ್ಣರೊಟ್ಟಿಗೆ ವಾಲಿಬಾಲ್ ಆಡಿದ ಡಿಕೆಶಿ..
ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ರೆ, ತಾವು ಈ ರೀತಿಯ ಹೀನ, ಹೇಡಿ ಕೆಲಸ ಮಾಡಲ್ಲ ಎಂದು ಬಿಜೆಪಿಗರು ಕಿಡಿಕಾರಿದ್ದಾರೆ.