ಚಾಮರಾಜನಗರ: ಬೈಕ್ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮತ್ತೀಪುರ ಗೇಟ್ ಬಳಿ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ಬಾಣೊರು ಗ್ರಾಮದ ಶಿವರಾಜು(30) ಮೃತಪಟ್ಟ ದುರ್ದೈವಿ. ಇನ್ನೋರ್ವ ಬೈಕ್ ಸವಾರ ಮನೋಜ್ (20) ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ಯ ನಿಮಿತ್ತ ಕೊಳ್ಳೇಗಾಲಕ್ಕೆ ಬರುತ್ತಿದ್ದ ವೇಳೆ ಮಂಡ್ಯದ ಸ್ವಾಮಿ ಎಂಬಾತ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಶಿವರಾಜುವಿನ ತಲೆಗೆ ತೀವ್ರ ಪೆಟ್ಟಾಗಿ ಹೆಚ್ಚು ರಕ್ತಸ್ರಾವ ಉಂಟಾಗಿದೆ. ಪ್ರಥಮ ಚಿಕಿತ್ಸೆ ಬಳಿಕ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ಸ್ವಾಮಿಗೂ ಗಾಯಗಳಾಗಿದ್ದು, ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತು ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.