ಚಾಮರಾಜನಗರ : ಬೈಕ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಎಸ್‌ಐಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಮಲ್ಲಿಕಾರ್ಜುನ ಹಾಗೂ ತೆರಕಣಾಂಬಿ ಪೊಲೀಸ್ ಠಾಣೆಯ ಎಎಸ್ಐ ಮಹದೇವಸ್ವಾಮಿ ಎಂದು ಗುರುತಿಸಲಾಗಿದೆ.
![bike-pickup-accident-two-asi-seriously-injured-at-chamarajanagar](https://etvbharatimages.akamaized.net/etvbharat/prod-images/16854383_yyyy.jpg)
ಬಾಳೆಕಾಯಿ ತುಂಬಿಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಎಎಸ್ಐಗಳನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಲಬುರಗಿ: ಸದ್ಯದಲ್ಲೇ ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಆತ್ಮಹತ್ಯೆ