ಚಾಮರಾಜನಗರ: ಇಂದು ಪ್ರಕಟಗೊಂಡ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ನಗರದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿದ ನಂತರ ರಸ್ತೆಯಲ್ಲಿದ್ದ ತ್ಯಾಜ್ಯವನ್ನೆಲ್ಲಾ ಕಾರ್ಯಕರ್ತರೇ ಸ್ವಚ್ಛಗೊಳಿಸಿದರು.
ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಘೋಷಣೆಗಳನ್ನು ಕೂಗುತ್ತಾ, ಪಚ್ಚಪ್ಪ ವೃತ್ತದಲ್ಲಿ ಜಮಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಕಳೆದ 4 ತಿಂಗಳಿಂದ ಯಡಿಯೂರಪ್ಪ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿರುವುದರಿಂದ ಸಿಕ್ಕಿರುವ ಜನಾದೇಶ ಇದಾಗಿದೆ. ಮತದಾರರು ಸ್ಪಷ್ಟ ಬಹುಮತ ನೀಡುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರೊ.ಮಲ್ಲಿಕಾರ್ಜುನಪ್ಪ ತಿಳಿಸಿದರು.