ಚಾಮರಾಜನಗರ: ಬೊಲೆರೋ ಮತ್ತು ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮೂವರು ಒಂದೇ ಬೈಕ್ನಲ್ಲಿ ಹೋಗುತ್ತಿದ್ದರು. ಮೂವರೂ ಮೃತರು ಮಾರ್ಟಳ್ಳಿ ಮೂಲದವರು ಎಂದು ತಿಳಿದು ಬಂದಿದೆ. ಬೈಕ್ ಸವಾರರು ಹಾಗೂ ಬೊಲೆರೋ ವಾಹನದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪಿಎಸ್ಐ ಅಶೋಕ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.