ಚಾಮರಾಜನಗರ: ಡಾ. ಬಿ. ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲವೆಂದು ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಇಂದು ನಗರದಲ್ಲಿ ಕನ್ನಡಪರ ಸಂಘಟನೆಗಳು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ ನಡೆಸಿದರು.
ಚಾಮರಾಜೇಶ್ವರ ದೇಗುಲದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪೊರಕೆ ಹಿಡಿದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಡೀ ಪ್ರಪಂಚದಲ್ಲೇ ಶ್ರೇಷ್ಠವಾದ ಸಂವಿಧಾನವನ್ನ ಕೊಟ್ಟಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಶಿಕ್ಷಣ ಇಲಾಖೆ ಅವಮಾನ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.