ಚಾಮರಾಜನಗರ: ನಾಯಕತ್ವ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ನಾಯಕತ್ವ ಬದಲಿಸುವ ಅವಶ್ಯಕತೆಯೇ ಇಲ್ಲ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಗೂ ಮೈಸೂರು ಉಸ್ತುವಾರಿಯಾಗಿ ಅಲ್ಪವೂ ಲೋಪವಾಗದಂತೆ ಕಾರ್ಯನಿರ್ವಹಿಸಿದ್ದೇನೆ ಎಂದು ದಸರಾ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ನಿರ್ಧಾರ ಮುಖ್ಯಮಂತ್ರಿಗೆ ಸೇರಿದ್ದು, ಮುಂದಿನ ತಿಂಗಳ ಮೊದಲ ವಾರ ಅಭಿವೃದ್ಧಿ ವಿಚಾರ ಕುರಿತಾಗಿ ದೆಹಲಿ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.