ಕೊಳ್ಳೇಗಾಲ: ನಗರದ ಕುಟುಂಬವೊಂದು ತಿರುಪತಿಗೆ ಹೋಗಿಬರುವಷ್ಟರಲ್ಲಿ ಅವರ ಮನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಘಟನೆ ನಡೆದಿದೆ. ಮನೆಯಲ್ಲಿದ್ದ 250 ಗ್ರಾಂ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ.
ಪಟ್ಟಣದ ನಿಗಣಾಪುರ ರಸ್ತೆಯ ಲಯನ್ಸ್ ಶಾಲೆ ಸಮೀಪದಲ್ಲಿರುವ ನಿವೃತ್ತ ಚೆಸ್ಕಾಂ ನೌಕರ ನಂಜಯ್ಯ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 15 ದಿನಗಳ ಹಿಂದಷ್ಟೆ ಕೊಳ್ಳೇಗಾಲ ಪಟ್ಟಣ ವ್ಯಾಪ್ತಿಯಲ್ಲಿ ಒಂದೇ ರಾತ್ರಿ ಮೂರು ಮನೆಗಳಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದವು. ಅದರ ಬೆನ್ನಲ್ಲೇ ಈಗ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿರುವುದು ಜನರನ್ನು ಆತಂಕಕ್ಕೆ ದೂಡಿದೆ.