ಚಾಮರಾಜನಗರ: ಹಬ್ಬದ ಸಂಭ್ರಮದಲ್ಲಿ ಮನೆಗೆ ಪೂಜಾ ಸಾಮಗ್ರಿಗಳನ್ನು ಬೈಕಿನಲ್ಲಿ ಕೊಂಡೊಯ್ಯುತ್ತಿದ್ದ ಶಿಕ್ಷಕನಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ರ ಯರಿಯೂರು-ಮದ್ದೂರು ಸೇತುವೆ ಬಳಿ ನಡೆದಿದೆ.
ಮದ್ದೂರು ಗ್ರಾಮದ ಕೇಶವಮೂರ್ತಿ ಮೃತ ಶಿಕ್ಷಕ. ಕೇಶವಮೂರ್ತಿ ಶ್ರಾವಣ ಶನಿವಾರ ಹಬ್ಬ ಆಚರಿಸಲು ಪೂಜಾ ಸಾಮಗ್ರಿಗಳನ್ನು ಕೊಂಡೊಯ್ಯುವಾಗ ಕೊಳ್ಳೇಗಾಲದ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.