ಚಾಮರಾಜನಗರ: ತಮಿಳುನಾಡಿನ ವಿವಿಧ ಭಾಗಗಳಿಂದ ತಾಳವಾಡಿಗೆ ಬರುತ್ತಿದ್ದ ಬಸ್ವೊಂದು ಪುಣಜನೂರು ಸಮೀಪ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈರೋಡ್, ಸತ್ಯಮಂಗಲಂ ಭಾಗಗಳಿಂದ ತಾಳವಾಡಿಯ ಮಸೀದಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಲು ಇವರು ಬರುತ್ತಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ.
ಗಾಯಾಳುಗಳು ಕಾರಿನಲ್ಲಿ ಸತ್ಯಮಂಗಲಂಗೆ ವಾಪಸ್ ಹಿಂತಿರುಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಸ್ ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿದಂತೆ ಮೂವರು ಸಾವು, ಇಬ್ಬರಿಗೆ ಗಾಯ