ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಹಮ್ಮದ್ ಶರೀಫ್ ಬಂಧಿತ ಆರೋಪಿ. ಈತ ಕಲಾಸಿಪಾಳ್ಯ ಬಳಿ ಇರುವ ಮನೆಯಲ್ಲಿ ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದ ಎನ್ನಲಾಗುತ್ತಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡ, ಆರೋಪಿಯಿಂದ 1 ಕೆಜಿ ಗಾಂಜಾ, ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ. ಇನ್ನು ದಾಳಿ ವೇಳೆ ಮತ್ತೋರ್ವ ಆರೋಪಿ ಇಜಾಜ್ ಪರಾರಿಯಾಗಿದ್ದಾನೆ.
ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿ ಅಹಮ್ಮದ್ ಶರೀಫ್ನನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.