ಚಾಮರಾಜನಗರ: ಮತದಾರರು ಹಾಗೂ ಮುಖಂಡರಿಗೆ ಔತಣಕೂಟ ಏರ್ಪಡಿಸಿದ ಆರೋಪದ ಮೇಲೆ ಶಾಸಕ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್, ಬಿಜೆಪಿ ಬೆಂಬಲಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಹಾಗೂ ಸಿದ್ದನಾಯಕ ಎಂಬವರ ಮೇಲೆ ಗುಂಡ್ಲುಪೇಟೆ ಠಾಣೆಯಲ್ಲಿ ಭಾನುವಾರ ಎಫ್ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿಯಾದ ಶ್ರೀಧರ್ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಭರ್ಜರಿ ಪಾರ್ಟಿ ನಡೆಸಲಾಗಿದೆ ಎನ್ನಲಾಗಿದೆ.
ಪಾರ್ಟಿ ನಡೆಸಿದ ಜಮೀನನ್ನು ಮಡಹಳ್ಳಿ ಗುಡ್ಡ ಕುಸಿದ ಪ್ರಕರಣದಲ್ಲಿ ಪರಾರಿಯಾಗಿರುವ ಹಕೀಬ್ ಗುತ್ತಿಗೆ ಪಡೆದುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.