ಚಾಮರಾಜನಗರ: ಹೆಚ್ಚುತ್ತಿರುವ ಕಾವೇರಿ ಹೊರಹರಿವಿನಿಂದಾಗಿ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದ 9 ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಹಾಗಾಗಿ ಕೊಳ್ಳೇಗಾಲದ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್ನಲ್ಲಿ ನೆರೆ ಸಂತ್ರಸ್ತರ ಪರಿಹಾರ ಕೇಂದ್ರ ತೆರೆಯಲಾಗುತ್ತಿದ್ದು, ಕಾವೇರಿ ಆರ್ಭಟಕ್ಕೆ ಮೊದಲು ತುತ್ತಾಗುವ ದಾಸನಪುರ ಗ್ರಾಮದ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.
ಕೊಳ್ಳೇಗಾಲದ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್ನಲ್ಲಿ ನೆರೆ ಸಂತ್ರಸ್ತರ ಪರಿಹಾರ ಕೇಂದ್ರ ತೆರೆಯಲಾಗುತ್ತಿದ್ದು, ಕಾವೇರಿ ಆರ್ಭಟಕ್ಕೆ ಮೊದಲು ತುತ್ತಾಗುವ ದಾಸನಪುರ ಗ್ರಾಮದ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.
ಕಳೆದ ವರ್ಷವೂ ಕೇರಳದಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ಹೊರಹರಿವು ಹೆಚ್ಚಾಗಿ ನದಿ ಪಾತ್ರದ ಗ್ರಾಮಗಳು ನಷ್ಟ ಅನುಭವಿಸಿದ್ದವು. ರೈತರ ಅಪಾರ ಪ್ರಮಾಣದ ಬೆಳೆ ನಾಶವಾಗಿತ್ತು. ಪ್ರವಾಹದ ಭೀತಿ ಎದುರಿಸುತ್ತಿರುವ ದಾಸನಪುರ, ಹಳೇಹಂಪಾಪುರ, ಮುಳ್ಳೂರು ಗ್ರಾಮಗಳಿಗೆ ಡಿಸಿ ಬಿ.ಬಿ.ಕಾವೇರಿ ತೆರಳಿ ನದಿ ನೀರಿನ ಮಟ್ಟ ವೀಕ್ಷಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾವೇರಿ ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿರುವ ಹಿನ್ನೆಲೆ ಆ. 10ರಿಂದ ಮೂರು ದಿನಗಳ ಕಾಲ ಸರ್ಕಾರಿ ರಜೆ ಇದ್ದರೂ ಸಹ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿರುವಂತೆ ಅಧಿಕಾರಿಗಳಿಗೆ ಡಿಸಿ ಆದೇಶ ಹೊರಡಿಸಿದ್ದಾರೆ.