ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಏರುಗತಿ ಕಂಡಿದ್ದು, ಶುಕ್ರವಾರ ಹೊಸದಾಗಿ 375 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇಂದಿನ ಹೊಸ ಪ್ರಕರಣಗಳಲ್ಲಿ ಚಾಮರಾಜನಗರದ ಮೆಡಿಕಲ್ ಕಾಲೇಜಿನ 57 ವಿದ್ಯಾರ್ಥಿಗಳು, ಗುಂಡ್ಲುಪೇಟೆಯ 10 ಮಂದಿ, ಡಿಎಡ್ ವಿದ್ಯಾರ್ಥಿಗಳು, 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದೆ. ಬಹುತೇಕ ಎಲ್ಲರೂ ಹೋಂ ಐಸೋಲೇಷನಲ್ಲೇ ಇದ್ದು, ಆರೋಗ್ಯವಾಗಿದ್ದಾರೆಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 48,049 ಜನರಿಗೆ ಕೋವಿಡ್, 18,115 ಮಂದಿ ಚೇತರಿಕೆ... ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ಇಂದು 170 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 1067 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1593ಕ್ಕೆ ಏರಿಕೆಯಾಗಿದೆ. ಇಂದು 3 ಸಾವಿರಕ್ಕೂ ಅಧಿಕ ಮಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದೆ. ಎರಡು ಸಾವಿರ ಮಂದಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಇಂದು 1267 ಮಂದಿಗೆ ಲಸಿಕೆ ಹಾಕಲಾಗಿದ್ದು, ಇವರಲ್ಲಿ 194 ಜನ ಬೂಸ್ಟರ್ ಡೋಸ್, 883 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ