ETV Bharat / state

210 ಮಂದಿ ಅಶಕ್ತರ, ಸೋಲಿಗ ವಿದ್ಯಾರ್ಥಿಗಳ ದತ್ತು ಪಡೆಯಲು ಮುಂದಾದ ಅಧಿಕಾರಿಗಳು!! - ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು

ಎಸ್​ಎಸ್​ಎಲ್​ಸಿಯಲ್ಲಿ ಅನುತ್ತೀರ್ಣರಾದ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಶೈಕ್ಷಣಿಕ ದತ್ತು ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಜಿಲ್ಲಾಧಿಕಾರಿ ಶಿಲ್ಪಾನಾಗ್
ಜಿಲ್ಲಾಧಿಕಾರಿ ಶಿಲ್ಪಾನಾಗ್
author img

By ETV Bharat Karnataka Team

Published : Sep 8, 2023, 5:58 PM IST

ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿಕೆ

ಚಾಮರಾಜನಗರ: ಅಶಕ್ತರು, ಏಕಪಾಲಕರು ಹಾಗೂ ಸೋಲಿಗ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ನೂತನ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದ್ದಾರೆ. ಹೌದು. ಚಾಮರಾಜನಗರದಲ್ಲಿ ಶೈಕ್ಷಣಿಕ ಕ್ರಾಂತಿಗೆ ಜಿಲ್ಲಾಡಳಿತ ಮುಂದಾಗಿದ್ದು, ಡಿಸಿ ಶಿಲ್ಪಾನಾಗ್ ಅವರಿಂದ ಮಹತ್ವದ ಯೋಜನೆ ರೂಪಿಸಿ - ಎಸ್ಸೆಸ್ಸೆಲ್ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಹಾಗೂ ಬುಡಕಟ್ಟು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಶೈಕ್ಷಣಿಕ ದತ್ತು ತೆಗೆದುಕೊಳ್ಳಲಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಟಾಸ್ಕ್: ಕ್ಷೇತ್ರ ಶಿಕ್ಷಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ತಲಾ ಓರ್ವ ಅಧಿಕಾರಿ 10 ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಮೇಲೆ ನಿಗಾ ಇಡಲಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸಿ ಎಸ್​ಎಸ್​ಎಲ್​ಸಿ ಪರೀಕ್ಷೆ ತೇರ್ಗಡೆಯಾಗುವ ಜೊತೆಗೆ ಪಿಯು ಶಿಕ್ಷಣ ಮುಂದುವರೆಸುವ ತನಕವೂ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ.

210 ಮಂದಿ ವಿದ್ಯಾರ್ಥಿಗಳು: ಚಾಮರಾಜನಗರ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ 166 ಮಂದಿ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ವ್ಯಾಸಂಗ ಮಾಡುತ್ತಿದ್ದು ಕಳೆದ ಬಾರಿ 88 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲಾಗಿದ್ದು, ಇವರಲ್ಲಿ ಕೋವಿಡ್ ಸಂತ್ರಸ್ತರ ಮಕ್ಕಳು, ಬುಡಕಟ್ಟು ಸಮುದಾಯ, ಸಿಂಗಲ್ ಪೇರೆಂಟ್ ವಿದ್ಯಾರ್ಥಿಗಳಿದ್ದು, ಇವರನ್ನು ಅಧಿಕಾರಿಗಳು ಶೈಕ್ಷಣಿಕ ದತ್ತು ಪಡೆಯಲಿದ್ದಾರೆ. ನವೆಂಬರ್​ ನಿಂದ ಡಿಸೆಂಬರ್ ವರೆಗೆ ವಿಶೇಷ ತರಗತಿ ನಡೆಸಲು ನಿರ್ಧಾರ ಮಾಡಲಾಗಿದ್ದು, 210 ವಿದ್ಯಾರ್ಥಿಗಳನ್ನು ದತ್ತು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸಲು ಚಿಂತನೆ, ಸಂಘ ಸಂಸ್ಥೆಗಳಿಂದ ಮಕ್ಕಳ ಊಟ, ವಸತಿಗೆ ವ್ಯವಸ್ಥೆ ಕೂಡ ಜಿಲ್ಲಾಡಳಿತ ಮಾಡಲು ಪ್ಲಾನ್ ಮಾಡಿಕೊಂಡಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸಿ ಶಿಲ್ಪಾನಾಗ್ ವಿನೂತನ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ವಲಯದಲ್ಲಿ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಕಳೆದ ಎರಡು ಶೈಕ್ಷಣಿಕವರ್ಷದಲ್ಲಿ ಅನುತ್ತೀರ್ಣರಾದ ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಂದಿನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವಂತೆ ಅವರಲ್ಲಿ ಕೌಶಲ್ಯಗಳನ್ನು ಬೆಳೆಸುವ ಕಾರ್ಯ ಮಾಡಲಾಗುತ್ತದೆ. ಅದಕ್ಕಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಹಾಗೇ ಮಕ್ಕಳ ದೈಹಿಕ ಶಿಕ್ಷಣ, ಊಟ ಸೇರಿದಂತೆ ವಸತಿಗೂ ವ್ಯವಸ್ಥೆ ಮಾಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಕೋವಿಡ್​ ಸಮಯದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಅವರಿಗೆ ಪರೀಕ್ಷೆಗೆ ಬೇಕಾದ ಎಲ್ಲ ತರಬೇತಿಯನ್ನು ನೀಡಲಾಗುತ್ತದೆ. ಜತೆಗೆ ಪರೀಕ್ಷಾ ಶುಲ್ಕ ಕಟ್ಟಲಾಗದ ವಿದ್ಯಾರ್ಥಿಗಳ ಶುಲ್ಕವನ್ನು ನಾವೇ ಭರಿಸಲಿದ್ದೇವೆ. ಸಹಾಯಕ್ಕಾಗಿ ಸಂಘ ಸಂಸ್ಥೆಗಳ ಮುಂದಾಗಿವೆ. ರೋಟರಿ ಇಂಟರ್​ನ್ಯಾಷನಲ್​ ಸಂಸ್ಥೆ ಮಕ್ಕಳಿಗೆ ಊಟ ಹಾಗೂ ಶಿಕ್ಷರ ವೇತನಕ್ಕೆ ಸಹಾಯ ಮಾಡುವುದಾಗಿ ಹೇಳಿದೆ. ಮಕ್ಕಳ ಉಳಿದುಕೊಳ್ಳಲು ಹಾಸ್ಟೆಲ್​, ಆಶ್ರಮಗಳಲ್ಲಿ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಮಹಿಷ ದಸರಾ ಆಚರಣೆ ಮಾಡಲು ನಾವು ಬಿಡುವುದಿಲ್ಲ: ಸಂಸದ ಪ್ರತಾಪ್ ಸಿಂಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.