ETV Bharat / state

ಕೊರೊನಾಗೆ ಚಾಮರಾಜನಗರದ ಪೊಲೀಸ್ ಸಿಬ್ಬಂದಿ ಬಲಿ - ಪೊಲೀಸ್​ಗೆ ಕೊರೊನಾ ಸೋಂಕು ಸುದ್ದಿ

ಹೈವೇ ಪ್ಯಾಟ್ರೊಲಿಂಗ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಮರಾಜನಗರದ ಪೊಲೀಸ್ ಸಿಬ್ಬಂದಿವೋರ್ವರು ಸಾವನ್ನಪ್ಪಿದ್ದಾರೆ.

ಪೊಲೀಸ್ ಸಿಬ್ಬಂದಿ ಬಲಿ
ಪೊಲೀಸ್ ಸಿಬ್ಬಂದಿ ಬಲಿ
author img

By

Published : Oct 4, 2020, 11:45 AM IST

ಚಾಮರಾಜನಗರ: ಮಹಾಮಾರಿ ಕೊರೊನಾಗೆ ಹೆದ್ದಾರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಬಲಿಯಾಗಿರುವ ಘಟನೆ ನಡೆದಿದೆ.

ಹನೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಳ್ಳೇಗಾಲದ ಪಾಳ್ಯ ಗ್ರಾಮದ 36 ವರ್ಷದ ಪೊಲೀಸ್​ ಮೃತರು. ಕಳೆದ ಸೆಪ್ಟೆಂಬರ್​ 30ರಂದು ಇವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕೆಲ ತಿಂಗಳುಗಳ ಹಿಂದೆಯಷ್ಟೇ ಚಾಮರಾಜನಗರ ಗ್ರಾಮಾಂತರ ಠಾಣೆಯ ಎಎಸ್ಐ ಹಾಗೂ ಗುಂಡ್ಲುಪೇಟೆಯ ಹೆಡ್ ಕಾನ್ಸ್‌ಟೇಬಲ್ ಕೊರೊನಾ ಸೋಂಕು ಕಾಣಿಸಿಕೊಂಡು ಅಸುನೀಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.