ETV Bharat / state

ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಂವಾದಕ್ಕೆ ಬುಡಕಟ್ಟು ಜನರನ್ನು ಆಯ್ಕೆ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು
author img

By

Published : Jul 2, 2023, 3:10 PM IST

ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ.

ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬುಡಕಟ್ಟು ಜನಾಂಗದವರನ್ನು ಆಯ್ಕೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿರುವ ನೈಜ ದುರ್ಬಲ ಸಮುದಾಯಗಳಾದ ಜೇನುಕುರುಬ, ಕೊರಗ ಸಮಾಜದ ಕೆಲವರನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಆಯ್ಕೆ ಮಾಡಿದೆ. ಹೀಗಾಗಿ ಆಯಾ ಜಿಲ್ಲೆಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ.

ಗುಂಡ್ಲುಪೇಟೆಯ ಜೇನುಕುರುಬರು ಆಯ್ಕೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಗುಂಡ್ಲುಪೇಟೆಯ ಮೂವರು ಜೇನು ಕುರುಬರನ್ನು ಆಯ್ಕೆ ಮಾಡಲಾಗಿದೆ. ದೇಶಿಪುರ ಕಾಲನಿಯ ಸಿದ್ದಮ್ಮ, ಪುಟ್ಟಮ್ಮ, ಮದ್ದೂರು ಕಾಲನಿಯ ಗೋವಿಂದ ಆಯ್ಕೆಯಾಗಿದ್ದಾರೆ. ಹಾಗೇ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಬಸಮ್ಮ, ರಾಜೇಶ್, ಅಯ್ಯಪ್ಪ, ಭೈರಾ, ಸಿ.ಭಾಸ್ಕರ, ಪುಟ್ಟಬಸವಯ್ಯ, ಹುಣಸೂರಿನ ಜೆ. ಪಿ. ಪಾರ್ವತಿ, ಸುಮಾ, ರಾಜಪ್ಪ, ಸಚಿನ್, ಪಿರಿಯಾಪಟ್ಟಣದ ಜಯಮ್ಮ, ಗೌರಿ, ಲಕ್ಷ್ಮೀ, ಜಾನಕಮ್ಮ, ಬಸವಣ್ಣ, ಬಸಪ್ಪ, ಸರಗೂರಿನ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಜೆ.ಕೆ.ಮುತ್ತಮ್ಮ, ಬಿ.ಕೆ.ಧರ್ಮಪ್ಪ, ಉಡುಪಿ ಜಿಲ್ಲೆಯ ನಳಿನಿ, ಡಾ.ಸಬಿತಾ, ಸುಶೀಲಾ, ಪ್ರಕೃತಿ, ಶಕೀಲಾ, ಸುನಂದಾ, ಕುಡ್ಪಾ, ಬಾಬು, ರಮೇಶ್, ಕೊಗ್ಗ, ಅಕ್ಷಯ್, ಕುಮಾರ್, ಸಂಜೀವ ಕೊರಗ, ಕೆ. ಪುತ್ರಯ, ದಕ್ಷಿಣ ಕನ್ನಡ ಜಿಲ್ಲೆಯ ರತ್ನ, ಚಂದ್ರವತಿ, ಶಶಿಕಲಾ, ರಾಧಾ, ಎಂ.ಸುಂದರ್, ಬಾಬು, ಮಥಾಡಿ, ಶ್ಯಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂವಾದದಲ್ಲಿ ರಾಷ್ಟ್ರಪತಿಯವರೊಂದಿಗೆ ಪೌಷ್ಟಿಕತೆ, ಶಿಕ್ಷಣ, ಅನುವಂಶೀಯ ಕಾಯಿಲೆಗಳು, ಬುಡಕಟ್ಟು ಜನರ ಸಮಸ್ಯೆಗಳ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ದ್ರೌಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಇತರೆ ಇಬ್ಬರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ಈ ಕುರಿತು ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಶೈಕ್ಷಣಿಕ, ರಾಜಕೀಯ ಹಾಗೂ ಬುಡಕಟ್ಟು ಜನಾಂಗದಿಂದ ಬಂದ ಅಂಶಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಬೆಂಗಳೂರಿಗೆ ಜುಲೈ 3ರಂದು ಬುಡಕಟ್ಟು ಜನಾಂಗದವರ ಸಂವಾದ ನಡೆಸಲು ಆಗಮಿಸುತ್ತಿರುವ ಸಂದರ್ಭದಲ್ಲೇ ರಾಜಭವನಕ್ಕೆ ಹೋಗಿ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ರಾಷ್ಟ್ರಪತಿ ಭವನ ಸಂಪರ್ಕಿಸಿ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರು ಗಣ್ಯರಿಗೆ KSOU ಗೌರವ ಡಾಕ್ಟರೇಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.