ETV Bharat / state

ಕೋವಿಡ್-19 ತಡೆಗೆ ಸಾಕಷ್ಟು ಮುಂಜಾಗೃತ ಕ್ರಮ, ಆತಂಕ ಬೇಡ: ಡಿಸಿ - ಚಾಮರಾಜನಗರ ಕೊರೊನಾ ವೈರಸ್ ಜಿಲ್ಲಾಧಿಕಾರಿ ಸಭೆ

ಕೊರೊನಾ ವೈರಸ್​ ಕುರಿತು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿದ್ದು, ಜಿಲ್ಲೆಯ ಜನತೆ ಯಾವುದೇ ಅತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಮನವಿ ಮಾಡಿದ್ದಾರೆ.

chamarajangar-dc-corona-awareness-meeting
ಚಾಮರಾಜನಗರ ಕೊರೊನಾ ವೈರಸ್ ಜಿಲ್ಲಾಧಿಕಾರಿ ಸಭೆ
author img

By

Published : Mar 13, 2020, 5:13 AM IST

ಚಾಮರಾಜನಗರ: ಕೋವಿಡ್-19 ಸಂಬಂಧ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿದ್ದು, ಜಿಲ್ಲೆಯ ಜನತೆ ಯಾವುದೇ ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪ್ರಕರಣ ವರದಿಯಾಗಿಲ್ಲ. ಅಂತರರಾಜ್ಯ ಚೆಕ್ ಪೋಸ್ಟ್​ಗಳಲ್ಲಿ ವಿಶೇಷ ಗಮನ ಹರಿಸಲಾಗಿದೆ. ತೀವ್ರ ಜ್ವರ, ಕೆಮ್ಮು, ಶೀತದಿಂದ ಬಳಲುತ್ತಿರುವ ಲಕ್ಷಣವಿದ್ದವರ ತಪಾಸಣೆ ಮಾಡಲಾಗುತ್ತಿದೆ ಎಂದರು.

ಅಲ್ಲದೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್​ಗಳನ್ನು ತೆರೆಯಲಾಗಿದೆ. ಕೊರೊನಾ ಆತಂಕ ಇರುವುದರಿಂದ ಜನರು ವಿದೇಶ ಪ್ರಯಾಣ ಮುಂದೂಡಬೇಕು. ವಿದೇಶದಲ್ಲಿರುವವರನ್ನು ಸದ್ಯಕ್ಕೆ ಅಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು. ವಿದೇಶದಿಂದ ಬಂದವರ ವಿವರವನ್ನು ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಸದ್ಯಕ್ಕೆ ಜಿಲ್ಲೆಯಲ್ಲಿ ಸಭೆ, ಸಮ್ಮೇಳನ ಕಾರ್ಯಕ್ರಮ ಮುಂದಕ್ಕೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಅಗತ್ಯ ವೈದ್ಯಕೀಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಭಕ್ತಾಧಿಗಳ ತಪಾಸಣೆಗಾಗಿ ಕೌದಹಳ್ಳಿ, ಪಾಲಾರ್ ಬಳಿ ಶಿಬಿರ ತೆರೆಯಲಾಗುವುದು. ವಿಶೇಷವಾಗಿ ತಮಿಳುನಾಡಿನಿಂದಲೂ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುವುದರಿಂದ ಅಲ್ಲಿಯೆ ತಪಾಸಣೆ ನಡೆಸಲು ಕೋರಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.