ಚಾಮರಾಜನಗರ : ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಹೋಂ ಐಸೋಲೇಷನ್ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಜಿಲ್ಲಾಧಿಕಾರಿಗೆ ಎರಡು ದಿನಗಳ ಹಿಂದೆ ನೆಗಡಿ, ಗಂಟಲು ನೋವು ಕಾಣಿಸಿದ್ದರಿಂದ ಶನಿವಾರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿತ್ತು. ಇಂದು ಫಲಿತಾಂಶದಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಓದಿ :ಕೊರೊನಾ 2ನೇ ಅಲೆ.. ಪ್ರವಾಸಿ ತಾಣಗಳ ಮೇಲಿನ ನಿರ್ಬಂಧ ಬೇಡ ಅಂತಾರೆ ವ್ಯಾಪಾರಸ್ಥರು
ಕಳವಳಕಾರಿ ಸಂಗತಿಯೆಂದರೆ, ಕೋವಿಡ್ಗೆ ತುತ್ತಾಗಿರುವ ಜಿಲ್ಲಾಧಿಕಾರಿ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದು 27 ದಿನ ಕಳೆದಿದೆ. ಜಿಲ್ಲಾಧಿಕಾರಿಗಳ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಸೋಮವಾರ ಮತ್ತು ಮಂಗಳವಾರ ಪರೀಕ್ಷೆಗೊಳಪಡಿಸುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.