ಚಾಮರಾಜನಗರ: ಜಿಲ್ಲೆಯಲ್ಲಿಂದು 62 ಕೋವಿಡ್-19 ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3696ಕ್ಕೆ ಏರಿಕೆಯಾಗಿದೆ. ಮೂವರು ಸೋಂಕಿತರು ಬಲಿಯಾಗಿದ್ದಾರೆ.
ಇಂದು 25 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 633 ಆಗಿದೆ. 28 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 294 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 534 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೂ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಚಾಮರಾಜನಗರ ತಾಲೂಕಿನ ಕಾಡಹಳ್ಳಿ ಗ್ರಾಮದ 75 ವರ್ಷದ ವೃದ್ಧ ಕಳೆದ 5 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಗರ್ಗೇಶ್ವರಿಯ 57 ವರ್ಷದ ಮಹಿಳೆ ಸೋಂಕಿತರಾಗಿ ಕಳೆದ 17 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಬುಧವಾರ ಅಸುನೀಗಿದ್ದಾರೆ.
ಚಾಮರಾಜನಗರ ತಾಲೂಕಿನ ನಡುಕಲುಮೋಳೆ ಗ್ರಾಮದ 58 ವರ್ಷದ ವ್ಯಕ್ತಿ ಕಳೆದ 7 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 85ಕ್ಕೆ ಏರಿಕೆಯಾಗಿದೆ.
ಮೂವರ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾನುಸಾರ ಸ್ವಯಂ ಸೇವಕರು ನೆರವೇರಿಸಿದ್ದಾರೆ.