ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಅಧಿಕಾರಿಗಳ ತಂಡ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ವ್ಯಾಪ್ತಿಯ 10ಕ್ಕೂ ಹೆಚ್ಚು ಗಣಿಗಾರಿಕೆ ಸ್ಥಳಗಳಾದ ಕೂತನೂರು, ಮಲ್ಲಯ್ಯನಪುರ, ಬೆಳಚಲವಾಡಿ, ಹಸಗೂಲಿ, ಹಿರೀಕಾಟಿ, ತೊಂಡವಾಡಿ, ಅರೇಪುರ, ರಂಗೂಪುರ, ಬೆಟ್ಟದಮಾದಹಳ್ಳಿ ಸೇರಿದಂತೆ ಬೇಗೂರು ಹೋಬಳಿಯ ಹಲವು ಗಣಿಗಾರಿಕೆ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಸಂಬಂಧಪಟ್ಟ ಗಣಿ ಮಾಲೀಕರಿಂದ ದಾಖಲಾತಿ ತರಿಸಿಕೊಂಡು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ: ಯುದ್ಧ ಪೀಡಿತ ಉಕ್ರೇನ್ನಿಂದ 236 ಕನ್ನಡಿಗರು ಬರೋದು ಬಾಕಿ: ಮನೋಜ್ ರಾಜನ್
ಕ್ವಾರಿಯ ವಿಸ್ತೀರ್ಣ, ಗಣಿಗಾರಿಕೆ ನಡೆದಿರುವ ಪರಿಮಿತಿ, ಒತ್ತುವರಿ, ಕೊರೆದಿರುವ ಆಳ ಸೇರಿದಂತೆ ಇನ್ನಿತರ ಮಾಹಿತಿ ಪಡೆದುಕೊಂಡಿದ್ದಾರೆ.
ತಂಡದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಿಡಿ ನಾಗಭೂಷಣ್, ಉಪ ವಿಭಾಗ ಅಧಿಕಾರಿ ಗಿರೀಶ್, ಡಿವೈಎಸ್ಪಿ ಪ್ರಿಯದರ್ಶಿಣಿ ಸಾಣೆಕೊಪ್ಪ, ತಹಶೀಲ್ದಾರ್ ರವಿಶಂಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದಾರೆ.