ಚಾಮರಾಜನಗರ: ಮಹಾಮಾರಿ ಕೊರೊನಾಗೆ ಚಾಮರಾಜನಗರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ. ಗುರುಸ್ವಾಮಿ (68) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 5 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮಧ್ಯಾಹ್ನ ಯಾನಗಹಳ್ಳಿಯ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಿ.ಪಂ ಮಾಜಿ ಅಧ್ಯಕ್ಷೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್ ಸೇರಿದಂತೆ ಇಬ್ಬರು ಪುತ್ರಿಯರು, ಪತ್ನಿಯನ್ನ ಗುರುಸ್ವಾಮಿ ಅಗಲಿದ್ದಾರೆ.