ETV Bharat / state

ಚಾಮರಾಜನಗರದ ಕೈ ಕ್ಷೇತ್ರಗಳಿಗೆ ಸಿಎಂ ಭೇಟಿ: ಮಹದೇಶ್ವರನ ದರ್ಶನ ಪಡೆಯಲಿರುವ ಬೊಮ್ಮಾಯಿ

ಡಿಸೆಂಬರ್​ 12ರಂದು ಚಾಮರಾಜನಗರ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ.

cm basavaraj bommai
ಬಸವರಾಜ ಬೊಮ್ಮಾಯಿ
author img

By

Published : Dec 3, 2022, 10:14 AM IST

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12ರಂದು ಚಾಮರಾಜನಗರ ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.

ಬೆಳಗ್ಗೆ 10.30ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 1ಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ, ನಂತರ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ಮತಗಳನ್ನು ಡಿಲೀಟ್ ಮಾಡಿದ್ದು ಸುಳ್ಳು: ಸಿಎಂ ಬೊಮ್ಮಾಯಿ

ಚಾಮರಾಜನಗರಕ್ಕೆ ಬಂದರೆ ಸಿಎಂ ಪಟ್ಟ ಹೋಗಲಿದೆ ಎಂಬ ಮೂಢನಂಬಿಕೆ ಬದಿಗೊತ್ತಿ ಈ ಹಿಂದೆ ನಗರದ ಸಿಮ್ಸ್ ಕಾಲೇಜು ಉದ್ಘಾಟನೆಯಲ್ಲಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಇದೀಗ ಮತ್ತೊಮ್ಮೆ ಜಿಲ್ಲೆಗೆ ಆಗಮಿಸುತ್ತಿದ್ದು, ಕೆರೆ ತುಂಬುವ ಯೋಜನೆ ಸೇರಿದಂತೆ ಹಲವು ಘೋಷಣೆ ಮಾಡಲಿದ್ದಾರೆ. ಚಾಮರಾಜನಗರ, ಹನೂರು ಕ್ಷೇತ್ರ ಕಾಂಗ್ರೆಸ್​ನ‌ ಭದ್ರಕೋಟೆಯಾಗಿದ್ದು ಬೊಮ್ಮಾಯಿ ಭೇಟಿಯಲ್ಲಿ ರಾಜಕೀಯ ಲೆಕ್ಕಾಚಾರವೂ ಅಡಗಿದೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.